ಯುವ ಕವಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ

ಯುವ ಕವಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ

The “Chaitra Chetana” poetry collection by young poet and writer Manjunath Bhandari was released in a literary and cultural event attended by writers, poets, and literature lovers.

ರಿಪ್ಪನ್ ಪೇಟೆ : ಪಟ್ಟಣದ ಯುವ ಕವಿ ಹಾಗೂ ಸಾಹಿತಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ ಸಮಾರಂಭವು ಭಾನುವಾರ ಗ್ರಾಮ ಪಂಚಾಯತಿ ಸಭಾಂಗಣದ ಕುವೆಂಪು ಸಭಾಭವನದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ನೆರವೇರಿತು.

ಹಿರಿಯ ಸಾಹಿತಿ ಶ್ರೀಪತಿ ಹಳಗುಂದ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿ, ಇಂದಿನ ವೇಗದ ಯುಗದಲ್ಲಿ ಸಾಹಿತ್ಯವು ಕೇವಲ ಮನರಂಜನೆಯ ಸಾಧನವಲ್ಲ, ಸಮಾಜದ ಒಳಹೊಕ್ಕ ಚಿಂತನೆಗಳನ್ನು ಹೊರತರುವ ಶಕ್ತಿಯಾಗಿದೆ ಎಂದು ಹೇಳಿದರು.

“ಚೈತ್ರ ಚೇತನ” ಕವನ ಸಂಕಲನದಲ್ಲಿ ಜೀವನ ಮೌಲ್ಯಗಳು, ಗ್ರಾಮೀಣ ಬದುಕಿನ ಸ್ಪಂದನೆ ಹಾಗೂ ಮಾನವೀಯತೆ ಸ್ಪಷ್ಟವಾಗಿ ವ್ಯಕ್ತವಾಗಿವೆ. ಯುವ ಕವಿಗಳು ಸಮಾಜದ ನೋವು-ನಲಿವುಗಳನ್ನು ಸಾಹಿತ್ಯದ ಮೂಲಕ ದಾಖಲಿಸುವ ಕಾರ್ಯ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ತ.ಮ. ನರಸಿಂಹ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಾಹಿತ್ಯ ಚಟುವಟಿಕೆಗಳು ಹೆಚ್ಚುತ್ತಿರುವುದು ಕನ್ನಡ ಭಾಷೆಯ ಆರೋಗ್ಯಕರ ಬೆಳವಣಿಗೆಯ ಸಂಕೇತವಾಗಿದೆ ಎಂದು ಹೇಳಿದರು. ಕವಿತೆಗಳು ಮಾನವನ ಅಂತರಂಗವನ್ನು ಜಾಗೃತಿಗೊಳಿಸುವ ಶಕ್ತಿ ಹೊಂದಿವೆ ಎಂದರು.

ಕಸಾಪ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕಾಮತ್ ಮಾತನಾಡಿ, ಸಾಹಿತ್ಯವು ಸಮಾಜವನ್ನು ಒಗ್ಗೂಡಿಸುವ ಸೇತುವೆಯಾಗಿದ್ದು, ಹೊಸ ಕವಿಗಳಿಗೆ ವೇದಿಕೆ ಸಿಗಬೇಕಾಗಿದೆ. ಈ ರೀತಿಯ ಕಾರ್ಯಕ್ರಮಗಳು ಹೊಸ ಪ್ರತಿಭೆಗಳಿಗೆ ಉತ್ತೇಜನ ನೀಡುತ್ತವೆ ಎಂದು ತಿಳಿಸಿದರು.
ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ ಸಾಹಿತ್ಯದ ಮೌಲ್ಯಗಳ ಕುರಿತು ಮಾತನಾಡಿದರೆ, ಸಾಹಿತ್ಯಾಸಕ್ತ ಕೆ. ಮೋಹನ್ ಕೃತಿಯ ಸಾಹಿತ್ಯಿಕ ಗುಣಗಳನ್ನು ಪ್ರಶಂಸಿಸಿದರು.

ಕಾರ್ಯಕ್ರಮಕ್ಕೆ ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಎಂ.ಎಂ. ಪರಮೇಶ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಬೀಬ್, ಪಿ. ರಮೇಶ್ ಹಾಗೂ ಟಿ.ಆರ್. ಕೃಷ್ಣಪ್ಪ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕವಿ ಎಂ. ಮಂಜುನಾಥ ಭಂಡಾರಿ ಮಾತನಾಡಿ, “ಕಾವ್ಯವು ನನ್ನ ಆತ್ಮದ ಅಭಿವ್ಯಕ್ತಿ. ಸಮಾಜದಲ್ಲಿ ಕಾಣುವ ಅನುಭವಗಳು, ನೋವುಗಳು ಮತ್ತು ಬದುಕಿನ ಸಣ್ಣ ಸಣ್ಣ ಸ್ಪಂದನೆಗಳೇ ಈ ಸಂಕಲನಕ್ಕೆ ಪ್ರೇರಣೆ,” ಎಂದು ಹೇಳಿದರು.

ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಣೆ ನಡೆಸಿದರು. ಸಾಹಿತ್ಯಾಸಕ್ತರು, ಕವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

4 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

6 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

14 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

14 hours ago