w
Headlines
Home » ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

GridArt 20260515

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

Two unidentified bike-borne youths snatched a gold mangalsutra worth ₹2.75 lakh from an elderly woman during her morning walk in Shivamogga’s Surya Layout. A case has been registered at Vinobanagar Police Station.

ಶಿವಮೊಗ್ಗ: ನಗರದ ಸೂರ್ಯ ಬಡಾವಣೆಯಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯೊಬ್ಬರ ಕೊರಳಿನಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾದ ಘಟನೆ ನಡೆದಿದೆ. ಕಳುವಾದ ಸರದ ಮೌಲ್ಯ ಸುಮಾರು ₹2.75 ಲಕ್ಷ ಎಂದು ಅಂದಾಜಿಸಲಾಗಿದೆ.

ಸೂರ್ಯ ಬಡಾವಣೆಯ ನಿವಾಸಿ ಇಂದಿರಾ ಅವರು ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ, ಕಪ್ಪು ಬಣ್ಣದ ಉಡುಪು ಧರಿಸಿದ್ದ ಸುಮಾರು 25 ವರ್ಷದ ಇಬ್ಬರು ಯುವಕರು ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದಾರೆ. ಈ ವೇಳೆ ಬೈಕ್‌ನಿಂದ ಇಳಿದ ಒಬ್ಬ ಯುವಕ ಏಕಾಏಕಿ ಇಂದಿರಾ ಅವರ ಬಳಿ ಬಂದು ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸರವನ್ನು ಕಸಿದುಕೊಳ್ಳುವ ವೇಳೆ ಇಂದಿರಾ ಅವರು ತಮ್ಮ ಎಡಗೈಯಿಂದ ಸರವನ್ನು ಗಟ್ಟಿಯಾಗಿ ಹಿಡಿದಿದ್ದರಿಂದ ಸರದ ಕೆಲವು ಭಾಗ ಹಾಗೂ ಗುಂಡುಗಳು ಅವರ ಕೈಯಲ್ಲೇ ಉಳಿದಿವೆ. ಆದರೆ ಉಳಿದ ಅರ್ಧ ಭಾಗದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.