ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು
A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station.
ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ಅರಣ್ಯ ಇಲಾಖೆಯು ಗೊಲ್ಲರಕೊಪ್ಪ ಗ್ರಾಮದ ವಡ್ಡಗಟ್ಟಿಸರ ಕೆರೆಯ ರಸ್ತೆ ಪಕ್ಕದಲ್ಲಿ ಹುಲಿ ಚಲನವಲನಗಳ ಮಾಹಿತಿ ಸಂಗ್ರಹಿಸಲು ಡಿಜಿಟಲ್ ಕ್ಯಾಮೆರಾವನ್ನು ಅಳವಡಿಸಿತ್ತು. ನಿಯಮಿತ ಗಸ್ತಿನ ವೇಳೆ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದಾಗ ಕ್ಯಾಮೆರಾ ಹಾಗೂ ಅದಕ್ಕೆ ಅಳವಡಿಸಿದ್ದ ಮೆಮೊರಿ ಕಾರ್ಡ್ಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಕಳುವಾದ ಕ್ಯಾಮೆರಾ ಮತ್ತು ಮೆಮೊರಿ ಕಾರ್ಡ್ಗಳ ಒಟ್ಟು ಮೌಲ್ಯ ಸುಮಾರು ₹25 ಸಾವಿರ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಆಯನೂರು ವಲಯದ ಮಲ್ಲಾಪುರ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶರತ್ ಕುಮಾರ್ ಅವರು ದೂರು ನೀಡಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್