ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು
Two forest officials have been suspended over allegations of illegal use and misuse of forest land. The department has initiated an inquiry into the matter following serious complaints.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. KELADI ಶಾಖೆಯ ಉಪವಲಯ ಅರಣ್ಯಾಧಿಕಾರಿ ಡಿಆರ್‌ಎಫ್ ವಿಜಯಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕ ಶಿವನಗೌಡ ದೊಡ್ಡಬಸಪ್ಪನವರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.
ಮಾವಲಿ ಗ್ರಾಮದ ಸರ್ವೆ ನಂಬರ್ 43ಕ್ಕೆ ಸೇರಿದ ಅರಣ್ಯ ಇಲಾಖೆಯ ಭೂಮಿಯಲ್ಲಿ ನೆಡು ತೋಪು ಹಾಗೂ ಸೊಪ್ಪಿನ ಬೆಟ್ಟ ಪ್ರದೇಶವಿದ್ದು, ಅಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ನಿಯಮಬಾಹಿರವಾಗಿ ರಸ್ತೆ ನಿರ್ಮಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬೆಳೆಸಲಾಗಿದ್ದ ನೂರಾರು ಕೇಶಿಯ ಹಾಗೂ ಇತರ ಕಾಡು ಮರಗಳನ್ನು ಅಕ್ರಮವಾಗಿ ಕಡಿದು ಸಾಗಣೆ ಮಾಡಲಾಗಿದೆ ಎಂಬ ಗಂಭೀರ ದೂರು ಸಹ ದಾಖಲಾಗಿತ್ತು.ಈ ದೂರಿನ ಆಧಾರದಲ್ಲಿ ಶಿವಮೊಗ್ಗ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆಟಿ ಹನುಮಂತಪ್ಪ ಅವರು ಬುಧವಾರ ಅಮಾನತು ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಆರರಂದು ದೂರು ಸಲ್ಲಿಕೆಯಾಗಿತ್ತು. ತನಿಖೆ ವೇಳೆ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಘಟನೆ ನಡೆದ ಸ್ಥಳವನ್ನು “ಅರಣ್ಯದ ಹೊರಭಾಗ” ಎಂದು ತಪ್ಪಾಗಿ ನಮೂದಿಸಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಗೆ ಅನುಕೂಲವಾಗುವ ಉದ್ದೇಶದಿಂದಲೇ ಈ ರೀತಿಯ ತೋಷಪೂರಿತ ದಾಖಲೆ ಸೃಷ್ಟಿಸಲಾಗಿದೆ ಎಂಬ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ.
ಸಚಿವರ ಕಚೇರಿಯಿಂದಲೇ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಅರಣ್ಯ ಸಂಪತ್ತಿನ ನಾಶ ಹಾಗೂ ದಾಖಲೆ ತಿರುಚುವ ಆರೋಪಗಳ ನಡುವೆ ಅಧಿಕಾರಿಗಳ ಅಮಾನತು ಕ್ರಮ ಸಾರ್ವಜನಿಕ ವಲಯದಲ್ಲಿ ಸ್ವಾಗತಕ್ಕೆ ಪಾತ್ರವಾಗಿದೆ.
ಅರಣ್ಯ ಸಂಪತ್ತಿನ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಇಚ್ಛೆಗೆ ಬಂದಂತೆ ನಡೆದುಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಭೂಮಿ ಅಕ್ರಮ ಬಳಕೆ, ಮರಗಳ ಕಡಿತ ಹಾಗೂ ದಾಖಲೆ ತಿರುಚುವಂತಹ ಗಂಭೀರ ಆರೋಪಗಳು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಸರ್ಕಾರವು ಇಂತಹ ಪ್ರಕರಣಗಳನ್ನು ಸಾಮಾನ್ಯ ಶಿಸ್ತು ಕ್ರಮಕ್ಕೆ ಸೀಮಿತಗೊಳಿಸದೆ, ಉನ್ನತ ಮಟ್ಟದ ಸ್ವತಂತ್ರ ತನಿಖೆಗೆ ಒಪ್ಪಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…