ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ

Shivamogga Sub-Divisional Officer Satyanarayana led a major raid on illegal sand mining in Hadonahalli along the Tungabhadra river, seizing around 80 loads of sand.

ಶಿವಮೊಗ್ಗ: ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಹಾಡೋನಹಳ್ಳಿಯ ತುಂಗಭದ್ರ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಖಡಕ್ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆಯಲ್ಲಿ ಸುಮಾರು 80 ಲೋಡ್ ಅಕ್ರಮ ಮರಳು ಪತ್ತೆಯಾಗಿದೆ.

ರಾತ್ರಿ ವೇಳೆ ನಡೆದ ದಾಳಿಯಲ್ಲಿ ನದಿಯ ಒಡಲಿನಿಂದ ಮಣ್ಣು ತೆಗೆದು ವಾಶ್‌ ಮೂಲಕ ಮರಳು ಬೇರ್ಪಡಿಸುವ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಹಾಡೋನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ರೀತಿಯ ಅಕ್ರಮ ಮರಳುಗಾರಿಕೆ ಬಹಳ ಕಾಲದಿಂದ ನಡೆಯುತ್ತಿದ್ದು, ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ಬರದೇ ಇರುವುದಾಗಿ ತಿಳಿದುಬಂದಿದೆ.

ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರು ಹಲವು ಬಾರಿ ಬೆಳಗ್ಗೆಯಿಂದ ರಾತ್ರಿ ತನಕ ಸ್ಥಳದಲ್ಲೇ ಇದ್ದು ದಾಳಿ ನಡೆಸಿದ ಉದಾಹರಣೆಗಳಿವೆ. ಆದರೆ ದಾಳಿ ಬಳಿಕವೂ ಮತ್ತೆ ಅಕ್ರಮ ಚಟುವಟಿಕೆ ಮುಂದುವರಿಯುತ್ತಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

2025ರಿಂದ ಇದುವರೆಗೆ ಹಾಡೋನಹಳ್ಳಿ ಭಾಗದಲ್ಲಿ 13ಕ್ಕೂ ಹೆಚ್ಚು ಬಾರಿ ದಾಳಿ ನಡೆದಿದ್ದರೂ, ಅಕ್ರಮ ಮರಳುಗಾರಿಕೆ ಮಾತ್ರ ನಿಲ್ಲದೇ ಮುಂದುವರಿದಿದೆ. ಪರಿಣಾಮವಾಗಿ ತುಂಗಭದ್ರ ನದಿಯ ಒಡಲು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು, ಪರಿಸರ ಹಾನಿ ಹೆಚ್ಚುತ್ತಿದೆ ಎಂಬ ಆತಂಕ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

ಅಕ್ರಮ ಮರಳುಗಾರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಗ್ರಾಮಸ್ಥರು, ಪೊಲೀಸರು, ಮಾಧ್ಯಮ, ಗಣಿ ಇಲಾಖೆ ಸೇರಿದಂತೆ ಎಲ್ಲರ ಸಹಕಾರ ಅಗತ್ಯವಿದೆ. ಒಬ್ಬ ಅಧಿಕಾರಿಯಿಂದ ಮಾತ್ರ ಈ ಜಾಲವನ್ನು ನಿಯಂತ್ರಿಸುವುದು ಸಾಧ್ಯವಿಲ್ಲ ಎಂಬುದು ಮತ್ತೆ ಸಾಬೀತಾಗಿದೆ.
ಪ್ರಸ್ತುತ ದಾಳಿಯಲ್ಲಿ ಪತ್ತೆಯಾದ ಮರಳನ್ನು ನದಿಯಲ್ಲೇ ಬಿಡಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

8 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

8 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

15 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago