ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president.

ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು.

ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಚಿದಂಬರ ಹೆಚ್.ಬಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣಪತಿ ಬಿ.ಕೆ. ಹಾಗೂ ಬೆನಕಪ್ಪ ಎಂ. ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಕುಮಾರ್ ಜಿ., ಸಹ ಕಾರ್ಯದರ್ಶಿಯಾಗಿ ಪ್ರಕಾಶ್ ಕೆ.ಡಿ. ಮತ್ತು ಖಜಾಂಚಿಯಾಗಿ ರಾಘವೇಂದ್ರ ಜಿ.ಬಿ. ಆಯ್ಕೆಯಾಗಿದ್ದಾರೆ.

ಇದೇ ವೇಳೆ ನಿರ್ದೇಶಕರಾಗಿ ರುಕ್ತೇಶ್ ಚಂದಳ್ಳಿ, ನಾಗೇಂದ್ರ ಎಲ್., ದೇವೇಂದ್ರಪ್ಪ ಕೆ., ಶಾಂತಪ್ಪ ಜಿ., ಉಮೇಶ್ ಬಿ., ದಿನೇಶ್ ಅರಳಿಕೊಪ್ಪ, ಸುನಿಲ್ ಟಿ., ಶಿವಾನಂದ ಎಸ್.ಎಂ., ಮಂಜುನಾಥ ಎಸ್. ಬ್ಯಾಣದ ಹಾಗೂ ಶಿವಾನಂದ ಎಸ್. ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸಮಾಜದ ಬಂಧುಗಳು ಶುಭಾಶಯ ಕೋರಿದ್ದು, ಗಂಗಾಮತ ಸಮಾಜದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಶ್ರಮಿಸುವಂತೆ ಹಾರೈಸಿದರು.

ಚುನಾವಣಾ ಪ್ರಕ್ರಿಯೆಯನ್ನು ಹಾಲಿ ಅಧ್ಯಕ್ಷ ಉಮೇಶ್ ಕೆ.ವೈ. ಅವರ ಉಪಸ್ಥಿತಿಯಲ್ಲಿ ಲೋಹಿತ್ ಕುಮಾರ್ ಹೆಚ್. ಹಾಗೂ ನಾಗೇಶ್ ಚಂದಳ್ಳಿ ಯಶಸ್ವಿಯಾಗಿ ನಿರ್ವಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

11 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago