Headlines

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students.

ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ  ಆರಗ ಜ್ಞಾನೇಂದ್ರ ಡಾ. ಅಂಬೇಡ್ಕರ್ ಅವರ ತತ್ವ, ಆದರ್ಶಗಳು ಮತ್ತು ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುವ ಮಹತ್ತರ ಕಾರ್ಯ ಮಾಡಿದೆ ,ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶಿಕ್ಷಣವೇ ಮುಖ್ಯ ಅಸ್ತ್ರವಾಗಿದ್ದು, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಪಾಲಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಸಭೆಯ ಅಧ್ಯಕ್ಷತೆಯನ್ನು ಬಿ.ಎಂ. ಕೃಷ್ಣಮೂರ್ತಿ ವಹಿಸಿದ್ದರು.

ವೇದಿಕೆಯಲ್ಲಿ ಪ್ರೊ. ಚಿದಾನಂದ, ಮಂಜುನಾಥ್ ಮಂಡ್ರಿ, ಸವಿತಾ, ಜಯ ಹರೀಶ್, ಪಡುವಳ್ಳಿ ಗಿರೀಶ್, ಹರೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Exit mobile version