w
Headlines
Home » ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

Images (2) (14)

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.


ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.


ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.