ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು
A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation.
ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸುವ ಹಂತಕ್ಕೆ ತಲುಪಿರುವ ಆಘಾತಕಾರಿ ಘಟನೆ ತಾಲೂಕಿನ ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಕರಡಿಗ ಗ್ರಾಮದ ನಿವಾಸಿ ಅಮೂಲ್ಯ ಅವರು ನೀಡಿರುವ ದೂರಿನ ಅನ್ವಯ, ಮೇ 27ರಂದು ಬೆಳಿಗ್ಗೆ 8.15ರ ಸುಮಾರಿಗೆ ಈ ಅಮಾನವೀಯ ಘಟನೆ ಜರುಗಿದೆ. ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವನ್ನು ಅಮೂಲ್ಯ ಪ್ರಶ್ನಿಸಿದ್ದಾರೆ. ಇದೇ ವೇಳೆ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ಆರೋಪಿಗಳು ಏಕಾಏಕಿ ಜಗಳಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಆರೋಪಿಗಳಾದ ಮಂಜುನಾಥ, ಚಂದ್ರಶೇಖರ, ಜಯಮ್ಮ, ಲೋಲಮ್ಮ, ಸೀಮಾ ಮತ್ತು ಮತ್ತೋರ್ವ ಚಂದ್ರಶೇಖರ್ ಎಂಬುವವರು ಒಗ್ಗೂಡಿ ಅಮೂಲ್ಯ ಹಾಗೂ ಅವರ ಪತಿ ಶಿವಶಂಕರ ಅವರ ಮೇಲೆ ಮುಗಿಬಿದ್ದಿದ್ದಾರೆ. ದಂಪತಿಯನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ಥಳಿಸಿದ್ದಾರೆ. ಹಲ್ಲೆಯ ತೀವ್ರತೆಗೆ ಮೈತುಂಬಾ ರಕ್ತ ಹೆಪ್ಪುಗಟ್ಟುವಂತಹ ಬಾಸುಂಡೆಗಳು ಬಿದ್ದಿವೆ.. ನಂತರ ಶಿವಶಂಕರ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರಾಣ ತೆಗೆಯುವುದಾಗಿ ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾರಣಾಂತಿಕ ಹಲ್ಲೆಯಿಂದ ಗಾಯಗೊಂಡು ನರಳುತ್ತಿದ್ದ ದಂಪತಿಯನ್ನು ಕಂಡ ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳು ದಂಪತಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ವಿವಿಧ ಗಂಭೀರ ಕಲಂಗಳಾದ U/s-189(2), 189(4), 191(2), 191(3), 126(2), 352, 74, 115(2), 118(1), 351(2), ಹಾಗೂ 190ರ ಅಡಿ ಒಟ್ಟು ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…