ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್!
Shocking humanity-defying crime near Kollur: Following a tragic road accident that claimed two lives, a local thief stole 18g of gold jewelry from a victim’s body. Within 24 hours of the complaint, Kollur police swiftly tracked down and arrested the accused, recovering all stolen ornaments worth ₹2.07 Lakhs. Read the full investigative story here.
ಕುಂದಾಪುರ: ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದ ದುರಂತದ ನಡುವೆ, ಮೃತ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 17ರಂದು ಕೊಡಚಾದ್ರಿಯಿಂದ ವಾಪಸ್ಸಾಗುತ್ತಿದ್ದ ಜೀಪು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಜ್ಯೋತಿ ಮತ್ತು ಅರಿಯಾ ಅನೂಫ್ ಎಂಬ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದ ರಕ್ತಸಿಕ್ತ ದೃಶ್ಯ, ಗಾಯಾಳುಗಳ ಆಕ್ರಂದನ ಮತ್ತು ಸಹಾಯಕ್ಕಾಗಿ ಕೇಳಿಬರುತ್ತಿದ್ದ ಗೋಳಾಟದ ನಡುವೆ, ಮಾನವೀಯತೆಯೇ ಮರೆತಿದ್ದ ಕಿಡಿಗೇಡಿಯೊಬ್ಬ ಮೃತ ಜ್ಯೋತಿ ಅವರ ಮೃತದೇಹದ ಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದನು.
ಅಪಘಾತದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವರನ್ನು ರಕ್ಷಿಸಬೇಕಿದ್ದ ಸಂದರ್ಭದಲ್ಲಿ, ಮೃತದೇಹದ ಮೇಲಿರುವ ಒಡವೆಗಳ ಮೇಲೆ ಕಣ್ಣುಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ನಡೆದು ಒಂದು ವಾರದ ಬಳಿಕ ಕುಟುಂಬಸ್ಥರು ಮೃತದೇಹವನ್ನು ಪರಿಶೀಲಿಸಿದಾಗ ಒಡವೆಗಳು ಮಾಯವಾಗಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 38/2026ರಡಿ ಬಿಎನ್‌ಎಸ್ ಕಲಂ 303(2) ಅನ್ವಯ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಹೆಚ್.ಡಿ. ಕುಲಕರ್ಣಿ ಮತ್ತು ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಪಿಎಸ್‌ಐ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತನಿಖೆಯನ್ನು ತೀವ್ರಗೊಳಿಸಿತು.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ಸೆರೆಹಿಡಿದಿದ್ದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಗಳನ್ನು ವಿಶ್ಲೇಷಿಸಿದ ಪೊಲೀಸರು, ಆರೋಪಿಯನ್ನು ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ (40) ಎಂದು ಗುರುತಿಸಿ ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು ₹2.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ,7.160 ಗ್ರಾಂ ತೂಕದ ಚಿನ್ನದ ಸರ ಸೇರಿವೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮೃತರ ಆಭರಣ ದೋಚಿದ ಈ ಅಮಾನವೀಯ ಕೃತ್ಯದ ವಿರುದ್ಧ ಸ್ಥಳೀಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪೊಲೀಸರ ತಕ್ಷಣದ ಸ್ಪಂದನೆಯನ್ನು ಶ್ಲಾಘಿಸಿದ್ದಾರೆ.
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…