ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ

A tragic lorry accident near Konanduru in Thirthahalli taluk claimed the life of a boy and left several passengers seriously injured after a vehicle carrying 35 people overturned on Hullathi Road.

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಮೇ 16ರಂದು ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಹರಿಹರ ಮೂಲದ ಸುಮಾರು 35 ಮಂದಿ ಪ್ರಯಾಣಿಕರನ್ನು ಹೊತ್ತ ಲಾರಿ ಹಣೆಗೆರೆ ಕಟ್ಟೆಯಿಂದ ಪಿರನ್‌ಗುಡ್ಡ ಕಡೆಗೆ ಸಾಗುತ್ತಿತ್ತು. ಈ ವೇಳೆ ಕೋಣಂದೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಪ್ರಯಾಣಿಕರು ರಸ್ತೆ ಬದಿಗೆ ಚದುರಿ ಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ತಕ್ಷಣ ಕೋಣಂದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

13 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

13 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

13 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

19 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

19 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

23 hours ago