w
Headlines
Home » ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

GridArt 20260520

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment.


ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ.


ಚಿತ್ರದುರ್ಗ ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿವಮೊಗ್ಗ ಕಡೆಯಿಂದ ಸಾಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.


ಗಾಯಾಳುಗಳನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.