ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!
Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office.
ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ವ್ಯಾಪಕ ದಾಳಿ ನಡೆಸಿದ್ದಾರೆ.
ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯ ಮೇಲೂ ದಾಖಲೆ ಪರಿಶೀಲನೆ ಕೈಗೊಂಡಿವೆ.
ಭದ್ರಾವತಿ ತಾಲ್ಲೂಕಿನ ನಿಂಬೆಗೊಂದಿ, ಮಂಗೋಟೆ ಹಾಗೂ ಸನ್ಯಾಸಿಕೊಡಮಗ್ಗಿ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಹಾಗೂ ಕೂಡಲಿ, ತೀರ್ಥಹಳ್ಳಿ ತಾಲ್ಲೂಕಿನ ಮಂಡುವಳ್ಳಿ, ತೂದೂರು ಮತ್ತು ದಬ್ಬಣಗದ್ದೆ ಪ್ರದೇಶಗಳಲ್ಲಿರುವ ಮರಳು ಕ್ವಾರಿಗಳ ಮೇಲೂ ಕಾರ್ಯಾಚರಣೆ ನಡೆಸಲಾಗಿದೆ.
ಹೊಸನಗರ ತಾಲ್ಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಹಾಗೂ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರದೇಶಗಳಲ್ಲಿಯೂ ಅಕ್ರಮ ಮರಳು ಚಟುವಟಿಕೆಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.
ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತಂತೆ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ ಈ ದಾಳಿ ನಡೆಸಲಾಗಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಅಕ್ರಮ ಮರಳು ಸಾಗಣೆ ವಿಚಾರವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು.
ಲೋಕಾಯುಕ್ತ ದಾಳಿಯ ಬಳಿಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಇನ್ನಷ್ಟು ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…