ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್ಮನ್ ವಿದ್ಯುತ್ ಸ್ಪರ್ಶಿಸಿ ಸಾವು
MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case.
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್ಮನ್ ಮೃತಪಟ್ಟ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಎಂ. ಕಲ್ಲಳ್ಳಿ ಗ್ರಾಮದ ಶಿವಕುಮಾರ ಚಕ್ರಸಾಲಿ (34) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಪಟ್ಟಣದ ಸುಪ್ರಭಾತ ಹೋಟೆಲ್ ಹಿಂಭಾಗ ಮಳೆಯಿಂದ ಹಾನಿಗೊಳಗಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಅವಘಡ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಶಿವಕುಮಾರ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್