ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management.
ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ. ಈಸೂರು ಮೂಲದ ನೇಹಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಕುಟುಂಬಸ್ಥರು ಮೂರು ದಿನಗಳ ಹಿಂದೆ ಮಾನಸ ನರ್ಸಿಂಗ್ ಹೋಂಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು.
ನೇಹಾಳನ್ನು ಆಲ್ಕೊಳ ವೃತ್ತದ ಬಳಿಯಿರುವ ಮಾನಸಾಧಾರ ಟ್ರಸ್ಟ್‌ಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ನೇಹಾ ಕೈಗೆ ಗಾಯ ಮಾಡಿಕೊಂಡಿದ್ದಾಳೆ ಎಂದು ತಿಳಿಸಿ ಆಸ್ಪತ್ರೆಗೆ ಬರುವಂತೆ ಹೇಳಿದ್ದಾರೆ. ಕುಟುಂಬಸ್ಥರು ಆಸ್ಪತ್ರೆಗೆ ಬಂದಾಗ ನೇಹಾ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪುನರ್ವಸತಿ ಕೇಂದ್ರದ ಶೌಚಾಲಯದಲ್ಲಿ ವೇಲ್ ಬಳಸಿ ನೇಹಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡದೇ ಆಸ್ಪತ್ರೆಗೆ ಕರೆತಂದಿರುವುದೇಕೆ ಎಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.
ದೊಡ್ಡಪೇಟೆ ಮತ್ತು ತುಂಗನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…