ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಿಥಿಲಾವಸ್ಥೆಯಲ್ಲಿರುವ ನಾಡಕಚೇರಿ ವೀಕ್ಷಣೆಗೆ ಭೇಟಿ ನೀಡಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಸಾರ್ವಜನಿಕರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ನಾಡಕಚೇರಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಕಚೇರಿಯನ್ನು ಇದೇ ಕಟ್ಟಡದಲ್ಲಿ ಮುಂದುವರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದರಿಂದ ಸರ್ಕಾರಕ್ಕೆ ಅನಗತ್ಯವಾಗಿ ಖರ್ಚಾಗುತ್ತಿರುವ ಬಾಡಿಗೆಯ ಹಣ ಉಳಿಯಲಿದೆ ಎಂದು ತಿಳಿಸಿದರು.

ಪಟ್ಟಣದ ಗ್ರಂಥಾಲಯ ಕಟ್ಟಡವೂ ಶಿಥಿಲಾವಸ್ಥೆಯಲ್ಲಿದ್ದು, ಅದರ ನೂತನ ಕಟ್ಟಡ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಮನವಿ ಮಾಡಲಾಯಿತು. ಜೊತೆಗೆ ಹಲವು ವರ್ಷಗಳಿಂದ ಸರ್ಕಾರಿ ಪಿಯು ಕಾಲೇಜು ಆರಂಭಿಸುವಂತೆ ಬೇಡಿಕೆ ಇರುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪಿಯು ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಶಾಸಕರನ್ನು ಒತ್ತಾಯಿಸಿದರು.

ಏಷ್ಯಾ ಖಂಡದಲ್ಲೇ ಎರಡನೇ ಅತಿದೊಡ್ಡ ನವಿಲುಧಾಮ ಎಂಬ ಖ್ಯಾತಿ ಪಡೆದಿರುವ 139 ಎಕರೆ ವ್ಯಾಪ್ತಿಯ ಕೋಟೆ ಆವರಣದಲ್ಲಿ ನವಿಲುಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ. ನವಿಲುಗಳ ಸಂರಕ್ಷಣೆ ಹಾಗೂ ವಾಸಕ್ಕೆ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ಪುರಸಭೆಯಲ್ಲಿ ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿಬಂದಿದ್ದು, ಈ ಕುರಿತು ಸಾರ್ವಜನಿಕರ ಅಹವಾಲು ಆಲಿಸಲು ಶೀಘ್ರ ಸಭೆ ಕರೆಯುವಂತೆ ಮನವಿ ಮಾಡಲಾಯಿತು.

ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಮಾತನಾಡಿ, “ಪಟ್ಟಣದ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಏ.ಕೆ. ಆದವಾನಿಮಠ, ಅಬ್ದುಲ್ ರಜಾಕ್ ತಹಸೀಲ್ದಾರ್, ಉಪ ತಹಸೀಲ್ದಾರ್ ವಿ.ವಿ. ಕುಲಕರ್ಣಿ, ಮಂಜುನಾಥ್ ಕೂಲಿ, ಮಹಮ್ಮದ್ ಹುಸೇನ್ ಖತೀಬ್, ಓಂಪ್ರಕಾಶ್ ಅಂಗಡಿ, ಸೋಮಣ್ಣ ಕುರಿ, ಸಿದ್ದಯ್ಯ ಹಿರೇಮಠ, ನನ್ನೇಸಾಬ್ ದೇವಗಿರಿ, ವಿಜಯ್ ದೇಸಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ನಿಂಗರಾಜ ಕುಡಲ್, ಹಾವೇರಿ ಜಿಲ್ಲೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

10 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

13 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

13 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago