w
Headlines
Home » ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

GridArt 20260515

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders.

ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಹೊಸನಗರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಎಸ್.ಉಮೇಶ್ ಕರೆ ನೀಡಿದ್ದಾರೆ.

ರಿಪ್ಪನ್‌ಪೇಟೆಯ ಶ್ರೀ ಬಸವೇಶ್ವರ ವೀರಶೈವ ಸಮಾಜದ ಶಿವಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಪೀಠದ ಜಗದ್ಗುರುಗಳಾದ ಬಾಳೆಹೊನ್ನೂರು ಪೀಠದ ಜಗದ್ಗುರು ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಕೇದಾರ ಪೀಠದ ಜಗದ್ಗುರು ಭೀಮಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹಾಗೂ ಕಾಶಿ ಪೀಠದ ವಿದ್ಯಾವಾಚಸ್ವತಿ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಂಚಪೀಠಾಧ್ಯಕ್ಷರು ಹಾಗೂ ಸಮಾಜದ ಮುಖಂಡರಿಂದ ಗೌರವ ಸಮರ್ಪಣೆ ನಡೆಯಲಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್ವರ, ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ, ಡಾ. ಧನಂಜಯ ಸರ್ಜಿ, ಎಸ್.ಎನ್.ಚನ್ನಬಸಪ್ಪ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಎಸ್.ರುದ್ರೇಗೌಡ, ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಧರ್ಮಜಾಗೃತಿ ಸಮಾವೇಶದಲ್ಲಿ ತಾಲ್ಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಲೀಲಾಶಂಕರ್, ಕರ್ಣೇಶ್ವರ ಡಿ.ಎಸ್., ಹಾಲಪ್ಪ ಚಿಕ್ಕಮಣತಿ, ಸದಾನಂದ, ವಾಣಿ ಶಿವಪ್ರಕಾಶ್ ಸೇರಿದಂತೆ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.