ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka.

​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪುಟ್ಟ ದ್ವೀಪ ಪ್ರದೇಶವಾದ ತುಮರಿಯ ಜನರಲ್ಲಿ ಸಂಭ್ರಮ ಮನೆಮಾಡುವಂತೆ ಮಾಡಿದೆ.

ಕರ್ನಾಟಕದ ನಂಟು:

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪಿ.ಸಿ. ವಿಷ್ಣುನಾಥ್ ಅವರು, ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲ್ಕೆರೆ ಗ್ರಾಮದವರಾದ ಕನ್ನಡದ ಕವಯಿತ್ರಿ ಹಾಗೂ ರಂಗಕರ್ಮಿ ಹಾ.ಮ. ಕನಕ ಅವರ ಪತಿ. 2005ರಲ್ಲಿ ಗುಜರಾತ್‌ನಲ್ಲಿ ನಡೆದ ಮಹಾತ್ಮ ಗಾಂಧಿಯವರ ದಂಡಿ ಸತ್ಯಾಗ್ರಹದ 75ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದ ಇವರಿಬ್ಬರು, ಆ ನಂತರ ಎರಡು ವರ್ಷಗಳ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಂಗಭೂಮಿ ಕಲಾವಿದೆಯಾಗಿರುವ ಕನಕ ಅವರು ಕೇರಳದಲ್ಲಿ ನಡೆಯುವ ‘ಪಂಪ’ (PAMPA) ಸಾಹಿತ್ಯ ಉತ್ಸವವನ್ನು ಆಯೋಜಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ರಾಜಕೀಯ ಹಿನ್ನೆಲೆ ಹಾಗೂ ಬೆಳವಣಿಗೆ:

​ನಾಲ್ಕು ಬಾರಿಯ ಶಾಸಕ: ವಿಷ್ಣುನಾಥ್ ಅವರು ಚೆಂಗನ್ನೂರು ಕ್ಷೇತ್ರದಿಂದ ಎರಡು ಬಾರಿ ಹಾಗೂ ಕೊಲ್ಲಂ ಜಿಲ್ಲೆಯ ಕುಂಡರ ಕ್ಷೇತ್ರದಿಂದ ಕಳೆದ ಎರಡು ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಉಮ್ಮನ್ ಚಾಂಡಿ ಗರಡಿಯಲ್ಲಿ ಪಳಗಿದ ನಾಯಕ:

ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಕುಟುಂಬದಿಂದ ಬಂದ ಇವರು, ಕಾಲೇಜು ದಿನಗಳಲ್ಲೇ ನಾಯಕರಾಗಿ ಬೆಳೆದರು. “ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ವಿಷ್ಣುನಾಥ್ ಅವರ ಸಾಮರ್ಥ್ಯವನ್ನು ಗುರುತಿಸಿ, ಅವರ ಆರಂಭಿಕ ರಾಜಕೀಯ ಜೀವನಕ್ಕೆ ಅತ್ಯುತ್ತಮ ಮಾರ್ಗದರ್ಶನ ನೀಡಿದರು” ಎಂದು ಸಚಿವರ ಬಾವ (ಕನಕ ಅವರ ಸಹೋದರ) ರಘು ಹಾಲ್ಕೆರೆ ಸ್ಮರಿಸುತ್ತಾರೆ.

ಊರಿನ ಮೇಲಿನ ಪ್ರೀತಿ:

ಸಚಿವ ಪಿ.ಸಿ. ವಿಷ್ಣುನಾಥ್ ಅವರು ಬಿಡುವಿದ್ದಾಗಲೆಲ್ಲಾ ತಮ್ಮ ಪತ್ನಿ ಹಾಗೂ ಪುತ್ರಿ ಅನ್ನಪೂರ್ಣೇಶ್ವರಿಯವರೊಂದಿಗೆ ನಿಯಮಿತವಾಗಿ ಹಾಲ್ಕೆರೆಗೆ ಭೇಟಿ ನೀಡುತ್ತಾರೆ. ಈ ಭಾಗದ ಪ್ರಸಿದ್ಧ ಸಮಾಜವಾದಿ ಹಾಗೂ ಸಾಹಿತಿಯಾಗಿದ್ದ ತಮ್ಮ ಮಾವ, ದಿವಂಗತ ಹಾ.ಮ. ಭಟ್ ಅವರ ಸ್ಮರಣಾರ್ಥ ರಘು ಹಾಲ್ಕೆರೆ ಅವರು ತುಮರಿಯಲ್ಲಿ ಪ್ರತಿವರ್ಷ ಆಯೋಜಿಸುವ ಮೂರು ದಿನಗಳ ವಾರ್ಷಿಕ ಸಾಹಿತ್ಯ ಕಾರ್ಯಕ್ರಮದಲ್ಲಿ ವಿಷ್ಣುನಾಥ್ ಅವರು ತಪ್ಪದೇ ಪಾಲ್ಗೊಳ್ಳುವ ಮೂಲಕ ತಮ್ಮ ಊರಿನ ನಂಟನ್ನು ಉಳಿಸಿಕೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

6 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

6 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

8 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

9 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

16 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

16 hours ago