ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details.

​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ಶನಿವಾರ (ಮೇ 2) ನಡೆದಿದೆ.

​ಮೃತರನ್ನು ಸುಳಗೋಡು ಗ್ರಾಮದ ವೀರಭದ್ರ ಅವರ ಪತ್ನಿ ಸ್ವಾತಿ (26) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಶನಿವಾರ ಮಧ್ಯಾಹ್ನ ಸುಮಾರು 3:30ರ ಹೊತ್ತಿಗೆ ಸ್ವಾತಿ ಅವರು ತಮ್ಮ ಪತಿ ಹಾಗೂ ಇತರ ಕೂಲಿ ಕಾರ್ಮಿಕರೊಂದಿಗೆ ಗ್ರಾಮದ ಶುಂಠಿ ಹೊಲವೊಂದರಲ್ಲಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನದ ಊಟ ಮುಗಿಸಿ ಎಲ್ಲರೂ ಮರದಡಿ ವಿಶ್ರಾಂತಿ ಪಡೆಯುತ್ತಿದ್ದಾಗ, ಸ್ವಾತಿ ಅವರ ಬಲಗಾಲಿನ ಮೊಣಕಾಲಿಗೆ ವಿಷಸರ್ಪವೊಂದು ಕಚ್ಚಿದೆ.

ನಾಟಿ ವೈದ್ಯರ ಮೊರೆ, ವಿಳಂಬದಿಂದ ಪ್ರಾಣಕ್ಕೆ ಕುತ್ತು:

ಹಾವು ಕಚ್ಚಿದ ತಕ್ಷಣವೇ ಅವರನ್ನು ಕಣ್ಣೂರಿನ ನಾಟಿ ವೈದ್ಯರೊಬ್ಬರ ಬಳಿ ಕರೆದೊಯ್ದು ಔಷಧಿ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

​ಆಸ್ಪತ್ರೆಗೆ ತಲುಪಿದಾಗ ಪರೀಕ್ಷಿಸಿದ ವೈದ್ಯರು, ಸ್ವಾತಿ ಅವರು ಆಗಲೇ ಮೃತಪಟ್ಟಿರುವುದನ್ನು ದೃಢಪಡಿಸಿದರು. ನಂತರ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಶಿವಮೊಗ್ಗದ ಮೆಗಾನ್ (McANN) ಆಸ್ಪತ್ರೆಗೆ ರವಾನಿಸಲಾಯಿತು. ಈ ಘಟನೆ ಕುರಿತು ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

​ಪರಿಹಾರಕ್ಕೆ ಕಟ್ಟುನಿಟ್ಟಿನ ಸೂಚನೆ: ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಮಾತನಾಡಿದ ಶಾಸಕರು, ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ ಸಿಗಬೇಕಾದ ಗರಿಷ್ಠ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದರು.

ಶಾಸಕರ ಭೇಟಿ ಮತ್ತು ಸಾಂತ್ವನ:

ದುರ್ಘಟನೆಯ ಸುದ್ದಿ ತಿಳಿದ ತಕ್ಷಣ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸುಳಗೋಡು ಗ್ರಾಮಕ್ಕೆ ಭೇಟಿ ನೀಡಿ, ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇದೇ ವೇಳೆ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ತಮ್ಮ ವತಿಯಿಂದ ವೈಯಕ್ತಿಕ ಧನಸಹಾಯ ನೀಡಿದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಶಾಸಕರು:

“ಹಾವು ಕಚ್ಚಿದ ಸಂದರ್ಭದಲ್ಲಿ ವಿಳಂಬ ಮಾಡದೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೆ ಪ್ರಾಣ ಉಳಿಸಬಹುದು. ತಾಲೂಕಿನ ಎಲ್ಲಾ ಆಸ್ಪತ್ರೆಗಳಲ್ಲೂ ಹಾವು ಕಡಿತಕ್ಕೆ ಅಗತ್ಯ ಚಿಕಿತ್ಸಾ ಸೌಲಭ್ಯಗಳಿವೆ. ಆದರೆ, ಮಾಹಿತಿಯ ಕೊರತೆಯಿಂದಾಗಿ ಜನ ನಾಟಿ ಔಷಧಿಯ ಮೊರೆ ಹೋಗಿ ವಿಳಂಬ ಮಾಡುತ್ತಿರುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಹಾವು ಕಚ್ಚಿದ ಕೂಡಲೇ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ” ಎಂದು ಶಾಸಕರು ಇದೇ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

4 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

4 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

19 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago