ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ
ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ
Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media.
ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಎಂ.ಎಸ್. ಗೌಡಪ್ಪ ಕರೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ ಬಕ್ರೀದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ
ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಂಚುವುದು, ಅನ್ಯ ಕೋಮಿನ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹರಡುವುದು ಹಾಗೂ ಸಮಾಜದ ಶಾಂತಿಗೆ ಭಂಗ ಉಂಟುಮಾಡುವ ರೀತಿಯಲ್ಲಿ ವರ್ತಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದು-ಮುಸ್ಲಿಂ ಸಮುದಾಯದವರು ಒಗ್ಗಟ್ಟಿನಿಂದ ಹಬ್ಬ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ ಎಂದರು.
ವಾಹನ ತಪಾಸಣೆ ನಡೆಸುವ ಮೂಲಕ ಗೋಹತ್ಯೆ, ಗೋಮಾಂಸ ಹಾಗೂ ಅಕ್ರಮ ಗೋ ಸಾಗಾಣಿಕೆಯನ್ನು ತಡೆಯಲಾಗುತ್ತಿದೆ. ಕಳ್ಳತನ ಅಥವಾ ಇತರೆ ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಅವರ ಹೆಸರನ್ನು ಗೌಪ್ಯವಾಗಿರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ, ಮಕ್ಕಾ ಮಸೀದಿ ಅಧ್ಯಕ್ಷರು, ಕೆಂಚನಾಳ-ಗಾಳಿಬೈಲು ಭಾಗದ ಮಸೀದಿಗಳ ಪದಾಧಿಕಾರಿಗಳು, ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಅಧ್ಯಕ್ಷ ಸುದೀರ್, ಕನ್ನಡ ಸಂಘದ ಅಧ್ಯಕ್ಷ ಮುರುಳಿಧರ ಕೆರೆಹಳ್ಳಿ, ರಾಮು ಬಳೇಗಾರ್, ಎಂ.ಬಿ. ಮಂಜುನಾಥ್, ಎಂ. ಸುರೇಶ್ ಸಿಂಗ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುದೀಂದ್ರ ಪೂಜಾರಿ, ಉಬೇದುಲ್ಲಾ, ಡಿ.ಇ. ಮಧುಸೂದನ್, ಅಶೀಫ್ ಭಾಷಾ, ನಿರೂಫ್ ಕುಮಾರ್, ರವೀಂದ್ರ ಕೆರೆಹಳ್ಳಿ, ಎನ್. ವರ್ತೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿನಾಯಕ ವೃತ್ತದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನಾಲ್ಕು ತಾಲೂಕುಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಪತ್ರಕರ್ತರು ಸಲಹೆ ನೀಡಿದರು.
ಠಾಣೆಯ ಪಿಎಸ್‌ಐ ರಾಜುರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಳಿಕ ವಂದಿಸಿದರು.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…