ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security.

ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪರಾಧ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಆದಿಲ್‌ನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚಿನ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಮೇ 9ರಂದು ನ್ಯೂ ಮಂಡ್ಲಿಯ ಮೊಬೈಲ್ ಅಂಗಡಿಯಲ್ಲಿ ಕೆಲಸ ಕಲಿಯುತ್ತಿದ್ದ ಇರ್ಫಾನ್ ಎಂಬ ಯುವಕನನ್ನು ಇಬ್ಬರು ಅಪರಿಚಿತರ ಮೂಲಕ ಅಪಹರಿಸಿದ್ದ ಆರೋಪವೂ ಆದಿಲ್ ವಿರುದ್ಧ ಕೇಳಿಬಂದಿದೆ. ಬೈಪಾಸ್ ಪ್ರದೇಶದಿಂದ ಕಿಯಾ ಕಾರಿನಲ್ಲಿ ಕೂರಿಸಿಕೊಂಡು ಭದ್ರಾವತಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದ ತನಿಖೆ ವೇಳೆ ಪೊಲೀಸರ ದಾಳಿ ನಡೆದಾಗ ಆದಿಲ್ ಪರಾರಿಯಾಗಿದ್ದನು. ಇದೀಗ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದಲ್ಲದೆ, ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 22ರಂದು ಇಬ್ಬರ ಮೇಲೆ ಹಲ್ಲೆ ನಡೆಸಿ, ಅಪಹರಿಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿಯೂ ಆದಿಲ್ ಮತ್ತು ಆತನ ಗ್ಯಾಂಗ್ ಭಾಗಿಯಾಗಿದ್ದರೆಂಬ ಆರೋಪಗಳಿವೆ.

ಆದಿಲ್ ಜೊತೆಗೆ ಮತ್ತೋರ್ವ ಆರೋಪಿಯನ್ನೂ ಬಂಧಿಸಿರುವ ಪೊಲೀಸರು, ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

4 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

6 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

14 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

14 hours ago