ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ
Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive.
ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.
ಪಟ್ಟಣದ ಮುಖ್ಯರಸ್ತೆಯ ಮೇಲೆಯೇ ಕೆಲವರು ವ್ಯಾಪಾರ ನಡೆಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ರಸ್ತೆ ಬದಿಗೆ ಸರಿದು ವ್ಯಾಪಾರ ನಡೆಸುವಂತೆ ಸೂಚನೆ ನೀಡಿದ್ದರು. ಸೂಚನೆ ಪಾಲಿಸದ ಹಿನ್ನೆಲೆ ಇಂದು ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡರು.
ಈ ವೇಳೆ ವ್ಯಾಪಾರಿಯೊಬ್ಬರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮಾರಾಟಕ್ಕೆ ಇಟ್ಟಿದ್ದ ಮಾವಿನಹಣ್ಣುಗಳನ್ನು ರಸ್ತೆಯ ಮಧ್ಯೆ ಸುರಿದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ನಂತರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ರಸ್ತೆಗೆ ಸುರಿದಿದ್ದ ಮಾವಿನಹಣ್ಣುಗಳನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಘಟನೆಯು ಸ್ಥಳೀಯರ ಗಮನ ಸೆಳೆದಿತು.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…