w
Headlines
Home » ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

IMG 20260502 WA0061

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math.

ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಜೂನ್ ತಿಂಗಳ ಮೊದಲ ವಾರದೊಳಗೆ ಎಲ್ಲಾ ಕಾಮಗಾರಿಗಳು ಮುಕ್ತಾಯವಾಗಲಿದ್ದು, ನಂತರ ರಾತ್ರಿ ವೇಳೆಯಲ್ಲಿಯೂ ವಿಮಾನಗಳ ಸಂಚಾರಕ್ಕೆ ಅವಕಾಶ ಸಿಗಲಿದೆ ಎಂದು ಕೆಎಸ್‌ಐಐಡಿಸಿ ಅಧ್ಯಕ್ಷ ನಂಜಯ್ಯ ಮಠ್ ತಿಳಿಸಿದ್ದಾರೆ.

ಶನಿವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರು. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಅಳವಡಿಕೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂದಿನ ವಾರ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಅವರು, ಆ ವೇಳೆಗೆ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿತ ಇಲಾಖೆಗೆ ಗಡುವು ನಿಗದಿಪಡಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡರೆ, ಶಿವಮೊಗ್ಗ ವಿಮಾನ ನಿಲ್ದಾಣವು ರಾತ್ರಿ ಸಮಯದಲ್ಲಿಯೂ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.