ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ
Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math.
ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಜೂನ್ ತಿಂಗಳ ಮೊದಲ ವಾರದೊಳಗೆ ಎಲ್ಲಾ ಕಾಮಗಾರಿಗಳು ಮುಕ್ತಾಯವಾಗಲಿದ್ದು, ನಂತರ ರಾತ್ರಿ ವೇಳೆಯಲ್ಲಿಯೂ ವಿಮಾನಗಳ ಸಂಚಾರಕ್ಕೆ ಅವಕಾಶ ಸಿಗಲಿದೆ ಎಂದು ಕೆಎಸ್ಐಐಡಿಸಿ ಅಧ್ಯಕ್ಷ ನಂಜಯ್ಯ ಮಠ್ ತಿಳಿಸಿದ್ದಾರೆ.
ಶನಿವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರು. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಅಳವಡಿಕೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಂದಿನ ವಾರ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಅವರು, ಆ ವೇಳೆಗೆ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿತ ಇಲಾಖೆಗೆ ಗಡುವು ನಿಗದಿಪಡಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡರೆ, ಶಿವಮೊಗ್ಗ ವಿಮಾನ ನಿಲ್ದಾಣವು ರಾತ್ರಿ ಸಮಯದಲ್ಲಿಯೂ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್