ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ
Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered.
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಜುನಾಥ ನಾಯ್ಕ ಬಂಧಿತ ಆರೋಪಿ. ಈತನನ್ನು ದಸ್ತಗಿರಿ ಮಾಡಿರುವ ಪೊಲೀಸರು, ಆತನಿಂದ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಚಿನ್ನದ ಸರವನ್ನು ಜಪ್ತಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಘಟನೆಯ ವಿವರ
ಕಳೆದ ಏಪ್ರಿಲ್ ೨೨ರಂದು ಸಂಜೆ ಯುವತಿಯೊಬ್ಬಳು ಕಾರಿನಿಂದ ಇಳಿಯುತ್ತಿದ್ದಾಗ, ಹಿಂಬದಿಯಿಂದ ಇಕೋ ಸ್ಪೋರ್ಟ್ (EcoSport) ಕಾರಿನಲ್ಲಿ ಬಂದಿದ್ದ ದುಷ್ಕರ್ಮಿ ಕ್ಷಣಾರ್ಧದಲ್ಲಿ ಆಕೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರು ಇದೀಗ ಆರೋಪಿಯನ್ನು ಕಾರು ಸಮೇತ ಹೆಡೆಮುರಿ ಕಟ್ಟಿದ್ದಾರೆ.
ವಶಪಡಿಸಿಕೊಂಡ ವಸ್ತುಗಳು:
ಚಿನ್ನದ ಸರ: ೧.೫೦ ಲಕ್ಷ ರೂ. ಬೆಲೆಬಾಳುವ ೧೦ ಗ್ರಾಂ ತೂಕದ ಬಂಗಾರದ ಸರ , ಕೃತ್ಯಕ್ಕೆ ಬಳಸಿದ್ದ ೫ ಲಕ್ಷ ರೂ. ಮೌಲ್ಯದ ಇಕೋ ಸ್ಪೋರ್ಟ್ ಕಾರು.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ (ಪಿಐ) ರಾಘವೇಂದ್ರ ಕಾಂಡಿಕೆ ಹಾಗೂ ಪಿ.ಎಸ್.ಐ ನವೀನ್ ಮಠಪತಿ ಮತ್ತು ಠಾಣಾ ಸಿಬ್ಬಂದಿ ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್