ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding.

ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು 20 ಕೆಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಕಾಚಗೊಂಡನಹಳ್ಳಿಯ ಅರುಮುಗ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ದಾಳಿ ವೇಳೆ ಪರಾರಿಯಾಗಿದ್ದಾನೆ. ಸೀಗೆಬಾಗಿಯ ಮುನ್ನ, ಸುರಗಿತೋಪಿನ ಚಂದ್ರಶೇಖರ್ ಹಾಗೂ ಹೊಸಸಿದ್ದಾಪುರದ ಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ.

ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಮಿಲಿಟರಿ ಕ್ಯಾಂಪ್, ಬಸ್ ನಿಲ್ದಾಣ ಹಾಗೂ ಸಂತೆ ಮೈದಾನದ ಸುತ್ತಮುತ್ತ ದಾಳಿ ನಡೆಸಿ ಆರೋಪಿಗಳನ್ನು ಮಾಂಸದ ಸಮೇತ ಬಂಧಿಸಲಾಯಿತು.

ಬಂಧಿತರಿಂದ ಅಂದಾಜು 20 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಅರುಮುಗ ಬಂಧನವಾದ ಬಳಿಕ ಜಿಂಕೆ ಬೇಟೆಯಾಡಿದ ಸ್ಥಳ ಸೇರಿದಂತೆ ಇತರ ಮಾಹಿತಿ ತಿಳಿದುಬರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

11 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago