ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets.

ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೇ 04ರ ಸೋಮವಾರ ಬೆಳಿಗ್ಗೆ, ಪೂರ್ವ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ ಹಾಗೂ ಸಿಪಿಸಿ ಸಂತೋಷ್ ಅವರು ಗಾಂಧಿ ಬಜಾರ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದರು. ಈ ವೇಳೆ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸಯ್ಯದ್ ಮುಜಾಮಿಲ್ ಅವರನ್ನು ಪೊಲೀಸರು ತಡೆದು, ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವಂತೆ ಸೂಚನೆ ನೀಡಿದರು.

ಇದಕ್ಕೆ ಆಕ್ರೋಶಗೊಂಡ ಸಯ್ಯದ್ ಮುಜಾಮಿಲ್ ರಸ್ತೆ ಮಧ್ಯದಲ್ಲೇ ವಾಗ್ವಾದಕ್ಕಿಳಿದನು. ಇದೇ ವೇಳೆ ಸ್ಥಳಕ್ಕೆ ಬಂದ ಜಬಿವುಲ್ಲಾ ಕೂಡ ಸೇರಿಕೊಂಡು, ಅವಾಚ್ಯ ಪದಗಳನ್ನು ಬಳಸುತ್ತಾ, “ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ?” ಎಂದು ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಇದಲ್ಲದೆ, ಇಬ್ಬರು ಆರೋಪಿಗಳು ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೈಕ್ ಕೀ ಕಿತ್ತುಕೊಂಡು ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ್ದಾರೆ.

ಈ ಕುರಿತು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಯ್ಯದ್ ಮುಜಾಮಿಲ್ ಮತ್ತು ಜಬಿವುಲ್ಲಾ ಎಂಬಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago