Headlines

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

Ipl betting (2)

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized.

ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಜಾಲವೊಂದನ್ನು ವಿನೋಬನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮೊಬೈಲ್ ಆಪ್ ಮೂಲಕ ಕಾರಿನಲ್ಲೇ ಕುಳಿತು ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಮೇ 21ರ ರಾತ್ರಿ ಶಿವಮೊಗ್ಗ ನಗರದ ಆರ್‌.ಎಂ.ಸಿ ಯಾರ್ಡ್ ಸಮೀಪ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಕೆಲವರು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ವಿನೋಬನಗರ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪಿ.ಎಸ್‌.ಐ ನೇತೃತ್ವದ ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ದಾಳಿ ನಡೆಸಿತು.

ದಾಳಿಯ ವೇಳೆ ಐವರು ಯುವಕರು “ಕ್ರಿಕ್ ಲೈನ್ ಗುರು” (Crick Line Guru) ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲೇ ಐವರನ್ನೂ ವಶಕ್ಕೆ ಪಡೆದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು ಸುಮಾರು ರೂ. 6.35 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರಲ್ಲಿ ರೂ. 35 ಸಾವಿರ ನಗದು, 7 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಮಹೀಂದ್ರಾ XUV 300 ಕಾರು ಸೇರಿವೆ.

ಬಂಧಿತ ಆರೋಪಿಗಳ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 112 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ 78(1)(a)(vi) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಈ ಕಾರ್ಯಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಶ್ಲಾಘಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.