ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ
Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation.
ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಸೂಚನೆಯ ಮೇರೆಗೆ ನಗರದಲ್ಲಿನ ವಿವಿಧ ಸ್ಪಾಗಳು, ಸಲೂನ್‌ಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ರಾಂಡಮ್ ತಪಾಸಣೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಇದಕ್ಕೆ ಪೂರಕವಾಗಿ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ವಿಶೇಷ ಪೊಲೀಸ್ ತಂಡ ದಿಢೀರ್ ಪರಿಶೀಲನೆ ನಡೆಸಿತು. ಮಹಿಳಾ ಪೊಲೀಸ್ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ದೊಡ್ಡಪೇಟೆ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಬ್‌ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಹಲವು ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಕಾರ್ಯಾಚರಣೆಯ ವೇಳೆ ಸ್ಪಾಗಳಲ್ಲಿ ನಡೆಯುವ ಚಟುವಟಿಕೆಗಳು, ಸಿಬ್ಬಂದಿಗಳ ವಿವರಗಳು, ದಾಖಲೆಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಈ ತಪಾಸಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ವೇಳೆ ಮಾಲೀಕರು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಪೊಲೀಸರು, ಯಾವುದೇ ರೀತಿಯ ಅಕ್ರಮ ಅಥವಾ ಕಾನೂನುಬಾಹಿರ ಚಟುವಟಿಕೆಗಳು ಪತ್ತೆಯಾದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…