Headlines

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation.

ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಸೂಚನೆಯ ಮೇರೆಗೆ ನಗರದಲ್ಲಿನ ವಿವಿಧ ಸ್ಪಾಗಳು, ಸಲೂನ್‌ಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ರಾಂಡಮ್ ತಪಾಸಣೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಇದಕ್ಕೆ ಪೂರಕವಾಗಿ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ವಿಶೇಷ ಪೊಲೀಸ್ ತಂಡ ದಿಢೀರ್ ಪರಿಶೀಲನೆ ನಡೆಸಿತು. ಮಹಿಳಾ ಪೊಲೀಸ್ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ದೊಡ್ಡಪೇಟೆ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಬ್‌ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಹಲವು ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕಾರ್ಯಾಚರಣೆಯ ವೇಳೆ ಸ್ಪಾಗಳಲ್ಲಿ ನಡೆಯುವ ಚಟುವಟಿಕೆಗಳು, ಸಿಬ್ಬಂದಿಗಳ ವಿವರಗಳು, ದಾಖಲೆಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಈ ತಪಾಸಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ವೇಳೆ ಮಾಲೀಕರು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಪೊಲೀಸರು, ಯಾವುದೇ ರೀತಿಯ ಅಕ್ರಮ ಅಥವಾ ಕಾನೂನುಬಾಹಿರ ಚಟುವಟಿಕೆಗಳು ಪತ್ತೆಯಾದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

About The Author