ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

Former Karnataka first-class cricketer and Shivamogga native SL Akshay passed away due to a heart attack while playing a Division-III league match in Bengaluru at the age of 39.

ಬೆಂಗಳೂರು: ಕರ್ನಾಟಕದ ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಹಾಗೂ ಶಿವಮೊಗ್ಗ ಮೂಲದ ಸಂತೇಬೆನ್ನೂರು ಲೋಕೇಶ್ ಅಕ್ಷಯ್ (39) ಅವರು ಬೆಂಗಳೂರಿನಲ್ಲಿ ಲೀಗ್ ಕ್ರಿಕೆಟ್ ಪಂದ್ಯವಾಡುವ ವೇಳೆ ಹೃದಯಾಘಾತದಿಂದ ಭಾನುವಾರ ಅಕಾಲಿಕವಾಗಿ ನಿಧನರಾಗಿದ್ದಾರೆ.

ಡಿವಿಷನ್-III ಲೀಗ್ ಪಂದ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಅಕ್ಷಯ್ ಏಕಾಏಕಿ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಎಸ್ಎಲ್ ಅಕ್ಷಯ್ ಅವರು 2014-15ರ ರಣಜಿ ಟ್ರೋಫಿ ವಿಜೇತ ಕರ್ನಾಟಕ ತಂಡದ ಸದಸ್ಯರಾಗಿದ್ದರು. ಆ ಋತುವಿನಲ್ಲಿ ಪಂದ್ಯಾವಕಾಶ ಸಿಗದಿದ್ದರೂ ತಂಡದ ಭಾಗವಾಗಿ ಗುರುತಿಸಿಕೊಂಡಿದ್ದರು. ಬಳಿಕ ಕರ್ನಾಟಕ ಪರ ವಿವಿಧ ಪ್ರಥಮ ದರ್ಜೆ ಹಾಗೂ ವೈಟ್-ಬಾಲ್ ಮಾದರಿಯ ಪಂದ್ಯಗಳಲ್ಲಿ ಆಡಿದ್ದರು.

ಅಕ್ಷಯ್ ತಮ್ಮ ವೃತ್ತಿಜೀವನದಲ್ಲಿ ಕರ್ನಾಟಕ ಪರ ಒಟ್ಟು ಆರು ಪ್ರಥಮ ದರ್ಜೆ ಪಂದ್ಯಗಳು, ಮೂರು ಏಕದಿನ ಹಾಗೂ ಒಂಬತ್ತು ಟಿ20 ಪಂದ್ಯಗಳನ್ನು ಆಡಿದ್ದು, ಒಟ್ಟು 32 ವಿಕೆಟ್‌ಗಳನ್ನು ಪಡೆದಿದ್ದರು. 2019ರ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಬಿಜಾಪುರ ಬುಲ್ಸ್ ತಂಡವನ್ನು ಪ್ರತಿನಿಧಿಸಿ ಕೊನೆಯ ವೃತ್ತಿಪರ ಪಂದ್ಯವನ್ನಾಡಿದ್ದರು.

ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೌರಾಷ್ಟ್ರ ವಿರುದ್ಧ ನಡೆದ ಪಂದ್ಯದಲ್ಲಿ ರಣಜಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅಕ್ಷಯ್, ನಂತರ ರಾಜ್ಯ ತಂಡದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.ಶಿವಮೊಗ್ಗ ಜಿಲ್ಲೆಯ ಸಂತೇಬೆನ್ನೂರಿನವರಾದ ಅಕ್ಷಯ್ ಅವರ ನಿಧನಕ್ಕೆ ಕ್ರಿಕೆಟ್ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago