ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

A 46-year-old school teacher died on the spot after a tractor collided with her scooter near Kannalli check post on the Sirsi-Siddapur road while she was travelling for census-related work.

ಸಿದ್ದಾಪುರ : ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶಿರಸಿ–ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಸಮೀಪ ಸಂಭವಿಸಿದೆ.

ಮೃತರನ್ನು ಪೂರ್ಣಿಮಾ ಭಟ್ (46) ಎಂದು ಗುರುತಿಸಲಾಗಿದೆ. ಇವರು ಪಟ್ಟಣದ ಹೊಸೂರು ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸಿರ್ಸಿ ಕಡೆಯಿಂದ ಸಿದ್ದಾಪುರದತ್ತ ಬರುತ್ತಿದ್ದ ಕಟ್ಟಿಗೆ ತುಂಬಿದ ಟ್ರ್ಯಾಕ್ಟರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್ ಅನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಚಾಲಕ ಆಕಾಶ್ ಮಂಜಪ್ಪ ಬಾಲಣ್ಣನವರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

8 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

9 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

9 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

14 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

15 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

18 hours ago