Headlines

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

GridArt 20260529

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation.

ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು ಕೊಟ್ಟಿಗೆ ಮೇಲೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ಗರ್ಭಿಣಿ ಎಮ್ಮೆ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಕೊಟ್ಟಿಗೆಯಲ್ಲಿದ್ದ ಇತರೆ ಜಾನುವಾರುಗಳಿಗೆ ಗಾಯಗಳಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಳೆಯೊಂದಿಗೆ ಬೀಸಿದ ಬಿರುಗಾಳಿಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಮರ ಬಿದ್ದ ರಭಸಕ್ಕೆ ಕೊಟ್ಟಿಗೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಗರ್ಭಿಣಿ ಎಮ್ಮೆ ಸ್ಥಳದಲ್ಲೇ ಅಸುನೀಗಿದ್ದು, ಉಳಿದ ಜಾನುವಾರುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಜಾನುವಾರುಗಳನ್ನು ರಕ್ಷಿಸುವ ಕಾರ್ಯ ನಡೆಸಿದರು.

ಘಟನೆಯ ಮಾಹಿತಿ ತಿಳಿದು ಇಂದು ಶಾಸಕ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಉಪ ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು, ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಯನ್ನು ಜೊತೆ ಕರೆದುಕೊಂಡು ಬಂದ ಅವರು, ಸಂತ್ರಸ್ತ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ಧನ ಸಹ ನೀಡಿದರು.

ಅಲ್ಲದೆ, ಸರ್ಕಾರದಿಂದ ಅಗತ್ಯ ಪರಿಹಾರ ದೊರಕಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕೃತಿ ವಿಕೋಪದಿಂದ ರೈತರಿಗೆ ಹಾಗೂ ಪಶುಸಂಗೋಪಕರಿಗೆ ಉಂಟಾಗುವ ನಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.