ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!
A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death.
ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ತ್ರಿಲೋಕ್ ಜೈನ್ (6) ಎಂದು ಗುರುತಿಸಲಾಗಿದೆ. ಆತ ಕೊಡವನಹಳ್ಳಿಯ ಗೌತಮ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದನು.
ಶಾಲೆಯ ಆವರಣದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ತ್ರಿಲೋಕ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಬಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ವೈದ್ಯಕೀಯ ವರದಿ ಬಳಿಕ ನಿಖರ ಕಾರಣ ತಿಳಿದುಬರಲಿದೆ. ಬಾಲಕ ಯಾವುದೇ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದನಾ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…
ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…