w
Headlines
Home » 6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

GridArt 20260616

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody.

ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಶೋಯಬ್ ಬಂಧಿತ ಆರೋಪಿ. ಆರು ವರ್ಷಗಳ ಹಿಂದೆ ನಡೆದ ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಗೆ ಗಾಯವಾಗುವಂತೆ ಮಾಡಿದ ಆರೋಪ ಆತನ ಮೇಲಿದ್ದು, ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಶಿಕಾರಿಪುರದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಆದರೆ, ಆರೋಪಿಯು ನ್ಯಾಯಾಲಯದ ಯಾವುದೇ ವಿಚಾರಣೆಗೆ ಹಾಜರಾಗದೇ ನಿರಂತರವಾಗಿ ತಲೆಮರೆಸಿಕೊಂಡಿದ್ದನು.

ಆರೋಪಿಯ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡ ಶಿಕಾರಿಪುರ ಗ್ರಾಮಾಂತರ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.