6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ
Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody.
ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ಶೋಯಬ್ ಬಂಧಿತ ಆರೋಪಿ. ಆರು ವರ್ಷಗಳ ಹಿಂದೆ ನಡೆದ ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಗೆ ಗಾಯವಾಗುವಂತೆ ಮಾಡಿದ ಆರೋಪ ಆತನ ಮೇಲಿದ್ದು, ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ಶಿಕಾರಿಪುರದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಆದರೆ, ಆರೋಪಿಯು ನ್ಯಾಯಾಲಯದ ಯಾವುದೇ ವಿಚಾರಣೆಗೆ ಹಾಜರಾಗದೇ ನಿರಂತರವಾಗಿ ತಲೆಮರೆಸಿಕೊಂಡಿದ್ದನು.
ಆರೋಪಿಯ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡ ಶಿಕಾರಿಪುರ ಗ್ರಾಮಾಂತರ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…