ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions.

ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಹಾಗೂ ಸರಕು ಸಾಗಾಣಿಕೆ ವಾಹನಗಳು) ಸಂಚಾರವನ್ನು ಜೂನ್ 15, 2026ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ–ಹೊಸನಗರ–ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ–ಮಲ್ಪೆ–ಉಡುಪಿ ಮಾರ್ಗದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾಗಿದೆ.

ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚಾದರೆ ಘಾಟಿಯ ವಿವಿಧ ಭಾಗಗಳಲ್ಲಿ ರಸ್ತೆ ಬದಿಯ ಭೂಕುಸಿತ, ಅಪಘಾತಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಆರೋಗ್ಯ ಸಂಬಂಧಿತ ಅಗತ್ಯಗಳಿಗಾಗಿ ಮಣಿಪಾಲ್, ಉಡುಪಿ ಹಾಗೂ ಮಂಗಳೂರಿಗೆ ತೆರಳುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ನಾಗರಿಕರ ಸಂಪರ್ಕ ಕಡಿತವಾಗುವ ಆತಂಕವೂ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಜಿಲ್ಲಾಡಳಿತ ನೀಡಿರುವ ಸೂಚನೆಯಂತೆ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುವ ಭಾರಿ ವಾಹನಗಳು : ತೀರ್ಥಹಳ್ಳಿ–ನಗರ–ನಾಗೋಡಿ–ಕೊಲ್ಲೂರು–ಕುಂದಾಪುರ–ಉಡುಪಿ ಮಾರ್ಗ ಅಥವಾ ತೀರ್ಥಹಳ್ಳಿ–ಶೃಂಗೇರಿ–ಕೆರೆಕಟ್ಟೆ–ಬಜಗೋಳಿ–ಕಾರ್ಕಳ–ಉಡುಪಿ ಮಾರ್ಗವನ್ನು ಬಳಸಬೇಕು.

ಅದೇ ರೀತಿ ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಉಡುಪಿ–ಕುಂದಾಪುರ–ಕೊಲ್ಲೂರು–ನಾಗೋಡಿ–ನಗರ–ತೀರ್ಥಹಳ್ಳಿ ಮಾರ್ಗ ಅಥವಾ ಕಾರ್ಕಳ–ಬಜಗೋಳಿ–ಕೆರೆಕಟ್ಟೆ–ಶೃಂಗೇರಿ–ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

10 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

10 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

11 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

12 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

19 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

20 hours ago