w
Headlines
Home » HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

GridArt 20260615

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

A KSRTC bus and a lorry collided at Ankrodi Mori curve on the Sagar-Hosanagara road near Hosanagara. No injuries were reported, while traffic movement was disrupted for some time.

ಹೊಸನಗರ: ತಾಲೂಕಿನ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಸಾಗರದಿಂದ ಹೊಸನಗರದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಜಯನಗರದಿಂದ ಆನಂದಪುರದತ್ತ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಕೆಲಕಾಲ ಸಾಗರ–ಹೊಸನಗರ ಮಾರ್ಗದಲ್ಲಿ ಬಸ್ ಸಂಚಾರ ವ್ಯತ್ಯಯಗೊಂಡಿತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡರು. ಅಪಘಾತದಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.