Categories: crime news

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway.

ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು ರಿಪ್ಪನ್‌ಪೇಟೆ ಪೊಲೀಸರು ವಶಕ್ಕೆ ಪಡೆದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ದೂನ, ಬೆನವಳ್ಳಿ ಹಾಗೂ ಅರಸಾಳು ಗ್ರಾಮಗಳಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಅರಸಾಳು ಗ್ರಾಮದ ಮಾಣಿಕೆರೆ ಬಳಿಯ ಖಾಸಗಿ ಗದ್ದೆಯ ಪಕ್ಕದ ನೀಲಗಿರಿ ತೋಪಿನಲ್ಲಿ ಕೆಲವರು ಹಣ ಪಣಕ್ಕಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಯಿತು.

ಮಾಹಿತಿ ಆಧರಿಸಿ ಸ್ಥಳಕ್ಕೆ ದಿಢೀರ್ ದಾಳಿ ನಡೆಸಿದ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆದರು. ದಾಳಿಯ ವೇಳೆ ಆರೋಪಿಗಳಿಂದ ₹3,150 ನಗದು, 52 ಇಸ್ಪೀಟ್ ಎಲೆಗಳು, ಜೂಜಾಟಕ್ಕೆ ಬಳಸಿದ್ದ ಪ್ಲಾಸ್ಟಿಕ್ ಟಾರ್ಪಲ್ ಹಾಗೂ ಬೆಡ್‌ಶೀಟ್ ಅನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ಸಂಖ್ಯೆ 158/2026 ದಾಖಲಿಸಲಾಗಿದೆ. ಪ್ರಕರಣವು ಅಸಂಜ್ಞೇಯ ಸ್ವರೂಪದ್ದಾಗಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿರುದ್ಧ ವಿಧಿವತ್ತಾಗಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿಶ್ವನಾಥ್ , ರಾಮಚಂದ್ರ ಹಾಗೂ ಅವಿನಾಶ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

4 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

4 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

4 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

10 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

10 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

14 hours ago