Headlines

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದವರ ಕಾರು ಹಳ್ಳಕ್ಕೆ ಉರುಳಿ ದುರಂತ: ಇಬ್ಬರು ಯುವಕರು ಸಾವು, ಹಲವರಿಗೆ ಗಂಭೀರ ಗಾಯ

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದವರ ಕಾರು ಹಳ್ಳಕ್ಕೆ ಉರುಳಿ ದುರಂತ: ಇಬ್ಬರು ಯುವಕರು ಸಾವು, ಹಲವರಿಗೆ ಗಂಭೀರ ಗಾಯ

Two young men were killed and several others injured after an Innova car lost control and plunged into a roadside ditch near Javagal in Hassan district while travelling to attend an engagement ceremony.

ಅರಸೀಕೆರೆ: ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ ಯುವಕರ ತಂಡವಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಅರಸೀಕೆರೆ ತಾಲೂಕಿನ ಜಾವಗಲ್ ಸಮೀಪ ಮಧ್ಯಾಹ್ನ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೋಸಿನ್ (24) ಹಾಗೂ ಮುಹಮ್ಮದ್ ಜಿಲಾನ್ (25) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮುಹಮ್ಮದ್ ಜಿಲಾನ್ ಅವರಿಗೆ ವಿವಾಹವಾಗಿದ್ದು, ಒಂದು ವರ್ಷದ ಮಗು ಇರುವುದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿದ ಕೂಡಲೇ ಜಾವಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

About The Author

Exit mobile version