ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ
A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case
ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ ತಮ್ಮನ ಜೀವವನ್ನೇ ಬಲಿತೆಗೆದುಕೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಾಘವೇಂದ್ರ (39) ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಅವರ ಅಣ್ಣ ಮಹೇಶ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಮಹೇಶ್ ಅವರಿಗೆ ಬ್ಯಾಂಕ್ ಸಾಲದ ಸಂಬಂಧ ನೋಟಿಸ್ ಬಂದಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮಹೇಶ್ ತಮ್ಮನಾದ ರಾಘವೇಂದ್ರ ವಿರುದ್ಧ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ.
ಮೇ 23ರಂದು ರಾತ್ರಿ ಸುಮಾರು 10.30ರ ವೇಳೆಗೆ ರಾಘವೇಂದ್ರ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಹೇಶ್ ಅವರನ್ನು ಅಡ್ಡಗಟ್ಟಿ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಅವರನ್ನು ಮೊದಲು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು.
ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಅಮೃತ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 9ರಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಮೃತರ ಪತ್ನಿ ಲಲಿತಾ ನೀಡಿದ ದೂರಿನ ಆಧಾರದ ಮೇಲೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…