ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation.

ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಗರದ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಅನುಷಾ (20) ಮೃತ ಯುವತಿ. ಪ್ರಕರಣ ಸಂಬಂಧ ಆಕೆಯ ಪ್ರಿಯಕರ ಶರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಷಾ ಮತ್ತು ಶರತ್ ಇಬ್ಬರೂ ಒಂದೇ ಊರಿನವರಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ 7ನೇ ಕ್ರಾಸ್‌ನ ಬಾಡಿಗೆ ಮನೆಯಲ್ಲಿ ಲಿವಿಂಗ್-ಟು-ಗೆದರ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಜೂನ್ 14ರಂದು ಅನುಷಾ ಊರಿಗೆ ಹೋಗಿ ಬರುವುದಾಗಿ ಶರತ್‌ಗೆ ತಿಳಿಸಿದ್ದಾಳೆ. ಆದರೆ ಇದಕ್ಕೆ ಆತ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಜಗಳ ತಾರಕಕ್ಕೇರಿದ ವೇಳೆ ಶರತ್ ತಾಳ್ಮೆ ಕಳೆದುಕೊಂಡು ಅನುಷಾಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಅನುಮಾನ ಬಾರದಂತೆ ಆಕೆಯ ಮೃತದೇಹವನ್ನು ಹಾಸಿಗೆಯ ಮೇಲೆ ಮಲಗಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪರಾರಿಯಾದ ಬಳಿಕ ಶರತ್ ವಕೀಲರೊಬ್ಬರಿಗೆ ಕರೆ ಮಾಡಿ ನಡೆದ ಘಟನೆಯನ್ನು ತಿಳಿಸಿದ್ದಾನೆ. ವಕೀಲರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪೋಸ್ಟ್‌ಮಾರ್ಟಂ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದು, ವಕೀಲರು ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

4 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

4 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

18 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago