Skip to content
August 6, 2026
  • ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ
  • ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
  • ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು
  • ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

POSTMANNEWS

ನೈಜ ಸುದ್ದಿ ನೇರ ಬಿತ್ತರ..

subscribe
Random News
  • Categories
    • ಅಂತರಾಷ್ಟ್ರೀಯ ಸುದ್ದಿ:
    • ಉದ್ಯೋಗ ಸುದ್ದಿ:
    • ಕ್ರೈಂ ಸುದ್ದಿ:
    • ಜಾಹಿರಾತು:
    • ಜಿಲ್ಲಾ ಸುದ್ದಿ:
    • ಜಿಲ್ಲಾಸುದ್ದಿ:
    • ನಿಧನ ವಾರ್ತೆ:
    • ರಫ಼ಿ ರಿಪ್ಪನ್ ಪೇಟೆ:
    • ರಾಜಕೀಯ ಸುದ್ದಿ:
    • ರಾಜಕೀಯ ಸುದ್ದಿಗಳು
    • ರಾಜ್ಯ ಸುದ್ದಿ:
    • ರಾಷ್ಟ್ರೀಯ ಸುದ್ದಿ:
    • ರಿಪ್ಪನ್ ಪೇಟೆ:
    • ವೈರಲ್ ಸುದ್ದಿ:
    • ಸಿನಿಮಾ ಜಗತ್ತು:
      • ಸ್ಥಳೀಯ ಸುದ್ದಿ:
  • Privacy Policy
  • Disclaimer
  • About
  • contact Us
follow in facebook
Headlines
  • ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

    20 hours ago
  • ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

    21 hours ago
  • ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

    21 hours ago
  • ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

    2 days ago
  • ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

    2 days ago
  • ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

    2 days ago2 days ago
  • Home
  • 2026
  • June
  • ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಉದ್ಯಮಿಗೆ ₹39.76 ಲಕ್ಷ ವಂಚನೆ; ಪ್ರಕರಣ ದಾಖಲು
  • crime news

ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಉದ್ಯಮಿಗೆ ₹39.76 ಲಕ್ಷ ವಂಚನೆ; ಪ್ರಕರಣ ದಾಖಲು

ರಫ಼ಿ ರಿಪ್ಪನ್ ಪೇಟೆ1 month ago01 mins

ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಉದ್ಯಮಿಗೆ ₹39.76 ಲಕ್ಷ ವಂಚನೆ; ಶಿವಮೊಗ್ಗ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು

A Bhadravathi-based businessman was allegedly duped of ₹39.76 lakh in an online trading investment scam. Shivamogga CEN Police have registered a case and launched an investigation.

ಶಿವಮೊಗ್ಗ, ಜೂನ್ 26: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ನಂಬಿಸಿ ಭದ್ರಾವತಿಯ ಉದ್ಯಮಿಯೊಬ್ಬರಿಂದ ಬರೋಬ್ಬರಿ ₹39,76,171.41 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ದೂರುದಾರ ಉದ್ಯಮಿ ಇನ್‌ಸ್ಟಾಗ್ರಾಮ್ ವೀಕ್ಷಿಸುತ್ತಿದ್ದ ವೇಳೆ ವಿವಿಧ ಕಂಪನಿಗಳ ಟ್ರೇಡಿಂಗ್ ಜಾಹೀರಾತುಗಳು ಕಾಣಿಸಿಕೊಂಡಿದ್ದವು. ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾಗಿ ಅವರು ಜಾಹೀರಾತಿನಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಮಾಹಿತಿಯನ್ನು ಹಂಚಿಕೊಂಡಿದ್ದರು.

ಬಳಿಕ ವಂಚಕರು, ಉದ್ಯಮಿಯ ಹೆಸರಿನಲ್ಲಿ ಡಿ-ಮ್ಯಾಟ್ ಖಾತೆ ತೆರೆಯಲಾಗುತ್ತದೆ ಎಂದು ತಿಳಿಸಿದ್ದರೂ, ಅದರ ಲಾಗಿನ್ ಐಡಿ ಹಾಗೂ ಪಾಸ್‌ವರ್ಡ್ ಅನ್ನು ತಮ್ಮ ವಶದಲ್ಲೇ ಇಟ್ಟುಕೊಂಡು ವಂಚನೆ ನಡೆಸಿದ್ದಾರೆ ಎನ್ನಲಾಗಿದೆ.

ನಂತರ ದೂರುದಾರರನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಿಕೊಂಡ ವಂಚಕರು, ಕ್ಯೂಆರ್ ಕೋಡ್‌ಗಳನ್ನು ಕಳುಹಿಸಿ 2023ರ ಜೂನ್‌ನಿಂದ 2026ರ ಮೇ ತಿಂಗಳವರೆಗೆ ಹಂತ ಹಂತವಾಗಿ ಒಟ್ಟು ₹39.76 ಲಕ್ಷಕ್ಕೂ ಅಧಿಕ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.

ದೂರುದಾರರು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಯತ್ನಿಸಿದಾಗ, “ಈಗ ಹಣ ತೆಗೆದರೆ ನಷ್ಟವಾಗುತ್ತದೆ” ಎಂದು ನಂಬಿಸಿ ಕಾಲಹರಣ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ತುರ್ತು ಹಣದ ಅಗತ್ಯ ಉಂಟಾದ ಹಿನ್ನೆಲೆಯಲ್ಲಿ ಹೂಡಿಕೆ ಮುಕ್ತಾಯಗೊಳಿಸಿ ಹಣ ವಾಪಸ್ ನೀಡುವಂತೆ ಕೇಳಿದಾಗ, ವಂಚಕರು ಡಿ-ಮ್ಯಾಟ್ ಖಾತೆಯನ್ನು ಸ್ಥಗಿತಗೊಳಿಸಿ ಸಂಪರ್ಕವನ್ನೇ ಕಡಿತಗೊಳಿಸಿದ್ದಾರೆ. ಇದರಿಂದ ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದ ದೂರುದಾರರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರ ಪತ್ತೆಗೆ ಮುಂದಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

About The Author

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.

ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”

ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.

ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.

ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.

– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

See author's posts

Tagged: bhadravathi CEN Police cyber crime Demat Account Instagram Scam Investment Fraud Karnataka News online trading scam Shivamogga Telegram Fraud

Post navigation

Previous: ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
Next: ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು
Newsmatic - News WordPress Theme 2026. Powered By BlazeThemes.