ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು
A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert.
ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಹಾರೋಗೊಪ್ಪ ತಾಂಡಾ ನಿವಾಸಿ ಮಂಜುನಾಥ್ ಆರ್ (32) ಎಂದು ಗುರುತಿಸಲಾಗಿದೆ. ಅವರು ಅಡುಗೆ ಕೆಲಸ ಮಾಡುತ್ತಿದ್ದು, ಜೂನ್ 18ರಂದು ತಮ್ಮ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ನಲ್ಲಿ ಶಿಕಾರಿಪುರಕ್ಕೆ ಕೆಲಸದ ನಿಮಿತ್ತ ತೆರಳಿದ್ದರು.
ಕೆಲಸ ಮುಗಿಸಿಕೊಂಡು ರಾತ್ರಿ ವೇಳೆ ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ತರಲಗಟ್ಟ ಗ್ರಾಮದ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿ ಕಟ್ಟೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಂಜುನಾಥ್ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್