ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ
ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.
ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು. ತಕ್ಷಣ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್ವತಿಯಿಂದ ಬಿಗಿಕ್ರಮ ಕೈಗೊಳ್ಳಲಾಗಿತ್ತು.ನಂತರ ಅದು ಹುಸಿ ಕರೆ ಎಂಬುದು ಗೊತ್ತಾಗಿತ್ತು.
ಈಗ ಮತ್ತೆ ಕಳೆದ 27ರ ಶನಿವಾರ ಮತ್ತು 29ರ ನಿನ್ನೆ ಬೆಳಗಿನ ಜವದಲ್ಲಿ ಮುಖ್ಯ ನ್ಯಾಯಾಧೀಶರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮತ್ತೆ ಎರಡೂ ಕರೆಗೆ ಸಂಬಂಧಿಸಿದಂತೆ ಜಯನಗರ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಕಳೆದ 6 ದಿನಗಳಿಂದ ಜಿಲ್ಲಾ ನ್ಯಾಯಾಲಯ ಸಂಕಿರ್ಣದ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಲ್ಲಾ ದ್ವಾರಗಳಲ್ಲಿಯೂ ತಪಾಸಣಾ ತಂಡ ಸಾರ್ವಜನಿಕರನ್ನು ಮತ್ತು ನ್ಯಾಯಾಲಯಕ್ಕೆ ಬರುವ ಎಲ್ಲರನ್ನು ಪರಿಶೀಲನೆ ನಡೆಸಿ, ಒಳಗೆ ಬಿಡಲಾಗುತ್ತಿದೆ. ಇಂದೂ ಕೂಡ ತಪಾಸಣಾ ತಂಡದಿಂದ ನ್ಯಾಯಾಲಯದ ಒಳಭಾಗದಲ್ಲಿ ಹಾಗೂ ಹೊರಭಾಗದಲ್ಲಿ ಬಾಂಬ್ ನಿಷ್ಕ್ರೀಯದಳ ಮತ್ತು ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.
ರಾಜ್ಯದ ಹಲವು ಜಿಲ್ಲೆಗಳ ನ್ಯಾಯಾಲಯಕ್ಕೆ ಈ ರೀತಿಯ ಹುಸಿಬಾಂಬ್ ಕರೆ ಬರುತ್ತಿದ್ದು, ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್