ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation.

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಜೂನ್ 3ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ, 41 ವರ್ಷದ ಮಹಿಳೆ ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪು ಮಹಿಳೆಯನ್ನು ಗಮನಿಸಿ, ‘ಸುಸ್ತಾಗಿದ್ದೀರಾ, ಕೂಲ್ ಡ್ರಿಂಕ್ಸ್ ಕುಡಿಯಿರಿ’ ಎಂದು ಹೇಳಿ ಪಾನೀಯ ನೀಡಿದರೆಂದು ಆರೋಪಿಸಲಾಗಿದೆ. ಪಾನೀಯದಲ್ಲಿ ಮದ್ಯ ಬೆರೆಸಲಾಗಿತ್ತು ಎನ್ನುವ ಆರೋಪವೂ ಕೇಳಿಬಂದಿದೆ.

ಬಳಿಕ ಮಹಿಳೆಯನ್ನು ಸಮೀಪದ ತೋಟಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳು ರಾತ್ರಿ ವೇಳೆದಿಂದ ಮುಂಜಾನೆಯವರೆಗೆ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದು, ಘಟನೆಯ ವೇಳೆ ಫೋಟೋ ಹಾಗೂ ವಿಡಿಯೊ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗಿದೆ.

ಇನ್ನೂ ಆರೋಪಿಗಳು ಆ ಫೋಟೋ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣ ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸಂಬಂಧಿತ ವಿಡಿಯೊಗಳನ್ನು ಅಳಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಮತ್ತು ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

12 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

13 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

13 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

14 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

18 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago