SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು
A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station.
ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸಾಗರದ ನಗರಸಭೆ ಆವರಣದಲ್ಲಿ ನಡೆದ ಕೃತ್ಯಕ್ಕೆ ಸಂಬಂಧಿಸಿದಂತೆ ನಾಗರಾಜ್ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ(FIR) ದಾಖಲಿಸಿಕೊಂಡಿದ್ದಾರೆ.
ಘಟನೆಯ ಹಿನ್ನೆಲೆ ;
ಸಾಗರ ತಾಲ್ಲೂಕಿನ ಎ.ಕೆ. ಕಾಲೋನಿ ನಿವಾಸಿಯಾದ 45 ವರ್ಷದ ಸಂತ್ರಸ್ತೆಯೊಬ್ಬರು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.ದೂರುದಾರರು ಸರ್ಕಾರಿ ಇಲಾಖೆಯಲ್ಲಿ ನಾನ್ ಗೆಜೆಟೆಡ್ (Non-Gazetted) ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದೂರಿನ ಅನ್ವಯ, ಆರೋಪಿ ನಾಗರಾಜ್ (A1) ಎಂಬ ವ್ಯಕ್ತಿಯು ಕಳೆದ 2023ರ ಜೂನ್ ತಿಂಗಳಿನಿಂದ 2026ರ ಜೂನ್ 8ರ ಅವಧಿಯಲ್ಲಿ ಸಾಗರ ನಗರಸಭೆಯ ಆವರಣದಲ್ಲಿ ದೂರುದಾರರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. “ನಿನ್ನ ಗಂಡ ಕುಡುಕ, ಅವನಿಂದ ನಿನಗೆ ದೈಹಿಕ ಸುಖ ಸಿಗುವುದಿಲ್ಲ. ನಾನು ನಿನಗೆ ಆಭರಣಗಳನ್ನು ಕೊಡುತ್ತೇನೆ, ನನ್ನೊಂದಿಗೆ ಸಹಕರಿಸು” ಎಂದು ಹೇಳಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ, ಸಂತ್ರಸ್ತೆ ಮಾರುಕಟ್ಟೆಗೆ ಅಥವಾ ಹೊರಗಡೆ ಹೋದಾಗಲೂ ಹಿಂದೆ ಬಂದು ದೈಹಿಕವಾಗಿ ಹಾಗೂ ಮಾನಸಿಕವಾಗಿ ಪೀಡಿಸಿ, ತನಗೆ ಸಹಕರಿಸದಿದ್ದರೆ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಯ ಸೆಕ್ಷನ್ 173ರ ಅಡಿಯಲ್ಲಿ ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯದ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…