ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ?

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ?

DK Shivakumar took oath as Karnataka’s 25th Chief Minister in the name of Veera Gangadhara Ajjayya. Here’s the story behind Ajjayya and the famous Nonavinakere Kadashiddeshwara Math.

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಈ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷ ಗಮನ ಸೆಳೆದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ರಾಜಕೀಯ ಜೀವನದ ಮಹತ್ವದ ಕ್ಷಣದಲ್ಲಿ ತಮ್ಮ ಆರಾಧ್ಯ ದೈವವಾದ ಅಜ್ಜಯ್ಯನನ್ನು ಸ್ಮರಿಸಿರುವ ಡಿ.ಕೆ. ಶಿವಕುಮಾರ್ ಅವರ ಭಕ್ತಿ ಮತ್ತು ನಂಬಿಕೆಗೆ ಇದು ಸಾಕ್ಷಿಯಾಗಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಇಡಲಾಗಿದ್ದ ಅಜ್ಜಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕವೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಮಾಹಿತಿಯ ಪ್ರಕಾರ, ಪದಗ್ರಹಣ ಸಮಾರಂಭದ ದಿನಾಂಕ ಮತ್ತು ಸಮಯವನ್ನು ಕೂಡ ಅಜ್ಜಯ್ಯನ ಮಠದ ಮಾರ್ಗದರ್ಶನದ ಮೇರೆಗೆ ನಿಗದಿಪಡಿಸಲಾಗಿತ್ತು. ಸಿಎಂ ಸ್ಥಾನಕ್ಕೇರಿದ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಡಿಕೆಶಿ ಅವರು ಅಜ್ಜಯ್ಯ ಮಠದ ಪೀಠಾಧಿಪತಿಗಳಾದ ಡಾ. ಕರಿವೃಷಭ ಶಿವಯೋಗಿಶ್ವರ ಶ್ರೀಗಳ ಸಲಹೆ ಮತ್ತು ಆಶೀರ್ವಾದ ಪಡೆದಿದ್ದರು ಎನ್ನಲಾಗಿದೆ.

ಪ್ರಮಾಣವಚನಕ್ಕೂ ಮುನ್ನದ ರಾತ್ರಿ ಬೆಂಗಳೂರಿನ ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ಅಲ್ಲಿಯೇ ಕೆಲ ಸಮಯ ಕಳೆದಿದ್ದರು.

ಅಜ್ಜಯ್ಯನ ಮಠ ಎಲ್ಲಿದೆ?

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠ, ಸ್ಥಳೀಯವಾಗಿ ‘ಅಜ್ಜಯ್ಯನ ಮಠ’ ಎಂದೇ ಪ್ರಸಿದ್ಧಿ ಪಡೆದಿದೆ. ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಈ ಮಠ ರಾಜ್ಯದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.

ಕರ್ನಾಟಕದ ಅನೇಕ ರಾಜಕೀಯ ನಾಯಕರು ಹಾಗೂ ಗಣ್ಯರು ಈ ಮಠದೊಂದಿಗೆ ಭಕ್ತಿಭಾವದ ನಂಟು ಹೊಂದಿದ್ದು, ಡಿ.ಕೆ. ಶಿವಕುಮಾರ್ ಕೂಡ ಅಜ್ಜಯ್ಯನ ಪರಮ ಭಕ್ತರಲ್ಲಿ ಒಬ್ಬರಾಗಿದ್ದಾರೆ. ರಾಜ್ಯ ರಾಜಕೀಯದ ಪ್ರಮುಖ ಘಟ್ಟಗಳಲ್ಲೂ ಅವರು ಈ ಮಠದ ಆಶೀರ್ವಾದ ಪಡೆಯುವುದು ವಿಶೇಷವಾಗಿ ಗಮನಾರ್ಹವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

23 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

23 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago