Categories: crime news

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case.

ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು ಗ್ರಾಮದ ದೊಣಂದೂರಿನಲ್ಲಿ ನಡೆದಿದೆ.

ದೊಣಂದೂರು ನಿವಾಸಿ ಕೃಷ್ಣಪ್ಪ (59) ಮೃತರು. ಇವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಸುಮಾರು ಮೂರು ವರ್ಷಗಳ ಹಿಂದೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಮನೆಯ ಹಿಂಭಾಗದಲ್ಲಿ ಬಾವಿ ತೋಡುವ ಕಾಮಗಾರಿ ನಡೆಯುತ್ತಿತ್ತು. ಬಾವಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರತೆಗೆದು ಖಾಲಿ ಮಾಡಲು ಮೋಟಾರ್ ಚಾಲನೆ ನೀಡುವ ಉದ್ದೇಶದಿಂದ ಕೃಷ್ಣಪ್ಪ ಅವರು ಮೋಟಾರ್ ವೈರನ್ನು ಮನೆಯ ಅಡುಗೆಮನೆಯ ಸ್ವಿಚ್‌ಗೆ ಸಂಪರ್ಕಿಸಲು ಮುಂದಾಗಿದ್ದರು.

ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಅವರ ಬಲಗೈಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಪತ್ನಿ ವೇದಾವತಿ ಹಾಗೂ ಸ್ಥಳದಲ್ಲಿದ್ದ ಕಾರ್ಮಿಕರ ಸಹಾಯದಿಂದ ಅವರನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತರ ಪತ್ನಿ ವೇದಾವತಿ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

14 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

15 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

15 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago