ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್!
A man from Andhra Pradesh was arrested by Shivamogga Cyber Crime Police for allegedly impersonating a Lokayukta officer and demanding money from a PWD Assistant Executive Engineer to close a case.
ಶಿವಮೊಗ್ಗ, ಜೂನ್ 24: ತಾನು ಲೋಕಾಯುಕ್ತ ಬೆಂಗಳೂರು ಮುಖ್ಯ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿಯಾಗಿದ್ದು, ಪ್ರಸ್ತುತ ಅನಂತಪುರಂ ಜಿಲ್ಲೆಯಲ್ಲಿ ವಾಸವಾಗಿರುವ ಟಿ. ಧನಂಜಯ ರೆಡ್ಡಿ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ಏಪ್ರಿಲ್ 22ರಂದು ಶಿವಮೊಗ್ಗ ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಪ್ಪೇಸ್ವಾಮಿ (59) ಅವರಿಗೆ ವಾಟ್ಸಾಪ್ ಕರೆ ಮಾಡಿ, ತಾನು ಲೋಕಾಯುಕ್ತ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದ. ನಿಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಲು ಆನ್‌ಲೈನ್ ಮೂಲಕ ಹಣ ಪಾವತಿಸಲು ಸಿದ್ಧರಿರಿ ಎಂದು ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಸಂಬಂಧ ತಿಪ್ಪೇಸ್ವಾಮಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಸೈಬರ್ ಅಪರಾಧ ಠಾಣೆಯ ಸಿಪಿಐ ಮಂಜುನಾಥ್ ನೇತೃತ್ವದಲ್ಲಿ ಎಎಸ್‌ಐ ಪ್ರಕಾಶ್ ಜೆ.ಕೆ., ಹೆಡ್ ಕಾನ್ಸ್‌ಟೇಬಲ್ ಕಿರಣ್‌ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಸಂಗಮೇಶ್ ಮತ್ತು ಶರತ್‌ಕುಮಾರ್ ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…